5ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.