ಸ್ತುತಿಗಳು 43

ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?

Psalm 43:2 (UKJV) For you are the God of my strength: why do you cast me off? why go I mourning because of the oppression of the enemy?

1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.

2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?

3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.

4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.

Kannada Bible (Old Version), Bible Society of India.