ಸ್ತುತಿಗಳು 44

ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.

Psalm 44:1 (UKJV) We have heard with our ears, O God, our fathers have told us, what work you did in their days, in the times of old.

1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.

2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.

3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

Kannada Bible (Old Version), Bible Society of India.