ಸ್ತುತಿಗಳು 44

ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.

Psalm 44:4 (UKJV) You are my King, O God: command deliverances for Jacob.

2ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.

3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.

5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.

6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.

Kannada Bible (Old Version), Bible Society of India.