ಸ್ತುತಿಗಳು 50

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

Psalm 50:14 (UKJV) Offer unto God thanksgiving; and pay your vows unto the most High:

12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.

13ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?

14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

16ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?

Kannada Bible (Old Version), Bible Society of India.