7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.