ಸ್ತುತಿಗಳು 51

ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

Psalm 51:11 (UKJV) Cast me not away from your presence; and take not your holy spirit from me.

9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.

10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.

11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

12ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.

13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.

Kannada Bible (Old Version), Bible Society of India.