13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.