ಸ್ತುತಿಗಳು 51

ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.

Psalm 51:2 (UKJV) Wash me thoroughly from mine iniquity, and cleanse me from my sin.

1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.

3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.

4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.

Kannada Bible (Old Version), Bible Society of India.