4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.