ಸ್ತುತಿಗಳು 54

ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.

Psalm 54:3 (UKJV) For strangers are risen up against me, and oppressors seek after my soul: they have not set God before them. Selah.

11 ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.

2ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.

3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.

4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.

5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.

Kannada Bible (Old Version), Bible Society of India.