9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.