ಸ್ತುತಿಗಳು 55

ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.

Psalm 55:14 (UKJV) We took sweet counsel together, and walked unto the house of God in company.

12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.

13ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.

14ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.

15ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.

16ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.

Kannada Bible (Old Version), Bible Society of India.