1ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?