1ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.