ಸ್ತುತಿಗಳು 59

ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.

Psalm 59:7 (UKJV) Behold, they belch out with their mouth: swords are in their lips: for who, say they, does hear?

5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.

6ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.

7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.

8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.

9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.

Kannada Bible (Old Version), Bible Society of India.