ಸ್ತುತಿಗಳು 67

ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

Psalm 67:3 (UKJV) Let the people praise you, O God; let all the people praise you.

1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.

3ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.

5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

Kannada Bible (Old Version), Bible Society of India.