4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
6ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.
7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.