22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.
24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.