1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;