ಸ್ತುತಿಗಳು 74

ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.

Psalm 74:4 (UKJV) Yours enemies roar in the midst of your congregations; they set up their ensigns for signs.

2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್‌ ಪರ್ವತವನ್ನೂ ಜ್ಞಾಪಕಮಾಡಿಕೋ.

3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.

4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.

5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;

6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.

Kannada Bible (Old Version), Bible Society of India.