5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
6ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.