ಸ್ತುತಿಗಳು 77

ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.

Psalm 77:2 (UKJV) In the day of my trouble I sought the Lord: my sore ran in the night, and ceased not: my soul refused to be comforted.

1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.

2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.

3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.

4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.

Kannada Bible (Old Version), Bible Society of India.