20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
24ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.