ಸ್ತುತಿಗಳು 8

ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

Psalm 8:3 (UKJV) When I consider your heavens, the work of your fingers, the moon and the stars, which you have ordained;

1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.

2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.

3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?

5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

Kannada Bible (Old Version), Bible Society of India.