ಸ್ತುತಿಗಳು 81

ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.

Psalm 81:8 (UKJV) Hear, O my people, and I will testify unto you: O Israel, if you will hearken unto me;

6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.

7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.

8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.

9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.

10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.

Kannada Bible (Old Version), Bible Society of India.