11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
14ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.