1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
2ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.