11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.