ಸ್ತುತಿಗಳು 91

ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.

Psalm 91:2 (UKJV) I will say of the LORD, He is my refuge and my fortress: my God; in him will I trust.

1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.

2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.

3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.

Kannada Bible (Old Version), Bible Society of India.