7ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.