ಸ್ತುತಿಗಳು 96

ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.

Psalm 96:3 (UKJV) Declare his glory among the heathen, his wonders among all people.

1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.

2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.

3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.

4ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.

5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.

Kannada Bible (Old Version), Bible Society of India.