15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.
17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.