ಪ್ರಕಟನೆ 13

ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.

Revelation 13:1 (UKJV) And I stood upon the sand of the sea, and saw a beast rise up out of the sea, having seven heads and ten horns, and upon his horns ten crowns, and upon his heads the name of blasphemy.

1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.

2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.

3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.

Kannada Bible (Old Version), Bible Society of India.