3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.