5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
9ಕಿವಿಯುಳ್ಳವನು ಕೇಳಲಿ.