ಪ್ರಕಟನೆ 13

ಕಿವಿಯುಳ್ಳವನು ಕೇಳಲಿ.

Revelation 13:9 (UKJV) If any man have an ear, let him hear.

7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.

8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

9ಕಿವಿಯುಳ್ಳವನು ಕೇಳಲಿ.

10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

11ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.

Kannada Bible (Old Version), Bible Society of India.