8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.