16ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
17ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
19ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.
20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.