1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.