3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.