5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ