1ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.