9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ