ಪ್ರಕಟನೆ 20

ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

Revelation 20:13 (UKJV) And the sea gave up the dead which were in it; and death and hell delivered up the dead which were in them: and they were judged every man according to their works.

11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ

13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

14ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.

15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

Kannada Bible (Old Version), Bible Society of India.