5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.