7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.