1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ