1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
2ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.