9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.